
(ನ್ಯೂಸ್ ಕಡಬ) newskadaba.com, ಅ .31. ದೇಶದ ಬಹುನಿರೀಕ್ಷಿತ 2027ರ ಜನಗಣತಿ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ವೇಳಾಪಟ್ಟಿ ಪ್ರಕಟಿಸಿದೆ. 2027ರ ಜನವರಿ 25ರಿಂದ ಫೆಬ್ರವರಿ 28ರವರೆಗೆ ದೇಶಾದ್ಯಂತ ಮನೆಮನೆಗೆ ತೆರಳಿ ಜನಗಣತಿ ನಡೆಸಲಾಗುತ್ತದೆ.
ಇದಕ್ಕೂ ಮುನ್ನ ಜನವರಿ 10ರಿಂದ 24ರವರೆಗೆ ಸಾರ್ವಜನಿಕರಿಗೆ ಸ್ವಯಂ-ಗಣತಿ ಸೌಲಭ್ಯ ಕಲ್ಪಿಸಲಾಗಿದೆ. ಜನಗಣತಿಯ ಉಲ್ಲೇಖಿತ ದಿನಾಂಕವನ್ನು ಮಾರ್ಚ್ 1ಕ್ಕೆ ನಿಗದಿಪಡಿಸಲಾಗಿದ್ದು, ಮಾರ್ಚ್ 1ರಿಂದ 5ರವರೆಗೆ ಪರಿಷ್ಕರಣಾ ಕಾರ್ಯ ನಡೆಯಲಿದೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೋವಾ, ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ ಹಾಗೂ ಮಣಿಪುರ ರಾಜ್ಯಗಳಿಗೆ ವಿನಾಯಿತಿ ನೀಡಲಾಗಿದೆ. ಅಲ್ಲದೆ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಜಮ್ಮು-ಕಾಶ್ಮೀರದ ಅತಿಹೆಚ್ಚು ಹಿಮಪಾತವಾಗುವ ಪ್ರದೇಶಗಳನ್ನು ಗಣತಿ ಕಾರ್ಯದಿಂದ ಹೊರಗಿಡಲಾಗಿದೆ.
ಸ್ವಾತಂತ್ರ್ಯಾನಂತರ ನಡೆಯುತ್ತಿರುವ ಈ ಮಹತ್ವದ ಜನಗಣತಿ ಸಂಪೂರ್ಣ ಡಿಜಿಟಲ್ ರೂಪದಲ್ಲಿ ನಡೆಯಲಿದ್ದು, ಮೊಬೈಲ್ ಆಪ್ ಹಾಗೂ ಆನ್ಲೈನ್ ವ್ಯವಸ್ಥೆಗಳ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತದೆ.




