ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ; ಇಬ್ಬರು ಯುವಕರು ದುರ್ಮರಣ

(ನ್ಯೂಸ್‌ ಕಡಬ) newskadaba.com, ನ. 03  . ಪಡನ್ನಕ್ಕಾಡ್‌ನ ನೆಹರೂ ಕಾಲೇಜು ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಿಲ್ಲಿಸಲಾಗಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದಾರೆ.ಮೃತರನ್ನು ನೀಲೇಶ್ವರದ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದಕೃಷ್ಣನ್ (24) ಎಂದು ಗುರುತಿಸಲಾಗಿದೆ.

ಕಾಞಂಗಾಡ್‌ನ ತಿರುವತ್ತ್ ಅರಯಿಲ್ ಭಗವತಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ತೆಯ್ಯಂ ನೋಡಲು ಇಬ್ಬರೂ ನೀಲೇಶ್ವರದಿಂದ ಬೈಕ್‌ನಲ್ಲಿ ತೆರಳುತ್ತಿದ್ದರು. ರಾತ್ರಿ 9 ಗಂಟೆಯ ಸುಮಾರಿಗೆ ಪಡನ್ನಕ್ಕಾಡ್‌ನಲ್ಲಿ ಈ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ತಕ್ಷಣವೇ ಕಾಞಂಗಾಡ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.ಮೃತ ಅನುರಾಗ್ ಅವರು ನೀಲೇಶ್ವರದ ವಸಂತ್ ಹೋಟೆಲ್‌ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು.

Scroll to Top