
(ನ್ಯೂಸ್ ಕಡಬ) newskadaba.com, ನ 04. ಮುಂಗಾರು ಮಳೆಯ ಕೊರತೆಯಿಂದಾಗಿ ರಾಜ್ಯದಲ್ಲಿ ಭತ್ತದ ನಾಟಿ ಮತ್ತು ಇಳುವರಿ ಗಣನೀಯವಾಗಿ ಕುಸಿದಿದೆ. ಪ್ರಮುಖ ಭತ್ತ ಬೆಳೆಯುವ ಪ್ರದೇಶಗಳಾದ ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರಿನಲ್ಲಿ ಉತ್ಪಾದನೆ ಇಳಿಕೆಯಾಗಿರುವುದು ಮಾರುಕಟ್ಟೆಯಲ್ಲಿ ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ.
ಸೋನಾ ಮಸೂರಿ, ಸ್ಟೀಮ್ ರೈಸ್, ಕೊಲಂ ರೈಸ್, ಬಾಸ್ಮತಿ, ಜೀರಾ ರೈಸ್ ಮತ್ತು ರಾಜ್ಮುಡಿ ಸೇರಿದಂತೆ ವಿವಿಧ ಅಕ್ಕಿ ಪ್ರಭೇದಗಳ ಬೆಲೆ ಗಣನೀಯವಾಗಿ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.ಅಕ್ಕಿಯ ತೀವ್ರ ಕೊರತೆ ಮತ್ತು ಬೆಲೆ ಏರಿಕೆಯಿಂದಾಗಿ ಹೋಟೆಲ್ ಉದ್ಯಮವು ತೊಂದರೆ ಅನುಭವಿಸುವಂತಾಗಿದೆ.
ಅಕ್ರಮವಾಗಿ ಅಕ್ಕಿ ದಾಸ್ತಾನು ಮಾಡುವವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಎಚ್ಚರಿಕೆ ನೀಡಿದೆ. ಆಹಾರ ಸಚಿವ ರಿಜ್ವಾನ್ ಅರ್ಷದ್ ಅವರ ಸೂಚನೆಯಂತೆ, ಇದುವರೆಗೆ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಸುಮಾರು 18 ಲಕ್ಷ ಕೆಜಿ ಅಕ್ಕಿಯನ್ನು ಸೀಜ್ ಮಾಡಲಾಗಿದ್ದು, 232ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.




