
(ನ್ಯೂಸ್ ಕಡಬ) newskadaba.com, ನ. 11 .ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಪ್ರಮುಖ ಮಾಹಿತಿಯೊಂದಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿಯ ಇ-ಕೆವೈಸಿ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.ಸಾರ್ವಜನಿಕರ ಹಿತದೃಷ್ಟಿಯಿಂದ ವಿಸ್ತರಿಸಲಾಗಿರುವ ಈ ಅವಧಿಯೇ ಅಂತಿಮವಾಗಿದ್ದು, ನವೆಂಬರ್ 30ರ ನಂತರ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಒಟ್ಟು 2.67 ಕೋಟಿ ಫಲಾನುಭವಿಗಳ ಪೈಕಿ ಹೆಚ್ಚಿನವರು ಇ-ಕೆವೈಸಿ ಪೂರ್ಣಗೊಳಿಸಿದ್ದು, ಇನ್ನೂ ಸುಮಾರು 39 ಲಕ್ಷ ಫಲಾನುಭವಿಗಳು ಮಾಡಿಸಬೇಕಿದೆ.
ಸರ್ಕಾರದ ಯೋಜನೆಗಳ ಸೌಲಭ್ಯಗಳು ಯಾವುದೇ ತೊಂದರೆಯಿಲ್ಲದೆ ನಿರಂತರವಾಗಿ ಸಿಗಲು ಬಾಕಿ ಇರುವ ಅರ್ಹ ಫಲಾನುಭವಿಗಳು ಕೂಡಲೇ ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.




