ಜಯನಗರ ಚುನಾವಣೆಯಲ್ಲಿ ಜಯದ‌ ನಗೆ ಬೀರಿದ ಕಾಂಗ್ರೆಸ್ ► ಮಾಜಿ ಗೃಹ ಸಚಿವರ ಪುತ್ರಿ ಸೌಮ್ಯ ರೆಡ್ಡಿಯ ‘ಕೈ’ ಹಿಡಿದ ಮತದಾರರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.13. ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯದ ನಗೆ ಬೀರಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ಕೈ ಹಿಡಿದಿರುವ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಕಾಂಗ್ರೆಸ್ ನ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಬಿಜೆಪಿಯ ಪ್ರಹ್ಲಾದ್ ಬಾಬು ವಿರುದ್ಧ ಎರಡು ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಠೇವಣಿ ಕಳೆದುಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್ ಕಾಂಗ್ರೆಸ್ ಅಭ್ಯರ್ಥಿಗೆ ತನ್ನ ಬೆಂಬಲವನ್ನು ಸೂಚಿಸಿತ್ತು.

Also Read  ಬಂಟ್ವಾಳದಲ್ಲಿ ಅಪರೂಪದ ಚಿಪ್ಪುಹಂದಿ ಪತ್ತೆ...!

error: Content is protected !!
Scroll to Top