(ನ್ಯೂಸ್ ಕಡಬ) newskadaba.com, ನ .24 . ಪುತ್ತೂರಿನಲ್ಲಿ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ ಎಸಗಿದ, ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸಿ ಬೆದರಿಕೆ ಹಾಕಿದ ಗಂಭೀರ ಆರೋಪ ಕೇಳಿಬಂದಿದೆ.
ಕಾಮಗಾರಿ ಪರಿಶೀಲನೆಯ ನೆಪದಲ್ಲಿ ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದು ಮೆಸ್ಕಾಂ ಕ್ವಾಟ್ರಸ್ನಲ್ಲಿ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾರೆ. ಅಲ್ಲದೆ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಹಾಗೂ ಸುಳ್ಳು ಕಳವು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯ ಮೇರೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.




