ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ► ಎರಡು ವಾರಗಳ ಕಾಲ ಇಲ್ಲೇ ಉಳಿದುಕೊಳ್ಳಲಿರುವ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜೂ.16. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಕೂಟದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ಎರಡು ವಾರಗಳ ಕಾಲ ಇಲ್ಲೇ ಉಳಿದುಕೊಳ್ಳಲಿದ್ದಾರೆ.

ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗಮಿಸುವ ಅವರು ಅಲ್ಲಿಂದ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ಪ್ರಯಾಣಿಸಲಿದ್ದಾರೆ. ಧರ್ಮಸ್ಥಳದಲ್ಲಿರುವ ನ್ಯಾಚುರೋಪತಿ ಚಿಕಿತ್ಸಾ ಕೇಂದ್ರದಲ್ಲಿ ಮುಂದಿನ ಎರಡು ವಾರಗಳ ಕಾಲ ವಿರಾಮ ಹಾಗು ಚಿಕಿತ್ಸೆ ಪಡೆಯಲಿದ್ದಾರೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಒತ್ತಡ ನಿವಾರಣೆಗಾಗಿ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.

Also Read  2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ       

error: Content is protected !!
Scroll to Top