(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ.16. ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತದಿಂದಾಗಿ ಸ್ಥಗೊತಗೊಂಡಿದ್ದ ವಾಹನ ಸಂಚಾರವು ಶುಕ್ರವಾರದಿಂದ ಸರಾಗವಾಗಿ ಆರಂಭಗೊಂಡಿದೆ.
ಚಾರ್ಮಾಡಿ ಘಾಟಿಯಲ್ಲಿ ಉಂಟಾಗಿದ್ದ ಭೂ ಕುಸಿತದ ಮಣ್ಣು ಹಾಗೂ ಮರಗಳ ತೆರವು ಕಾರ್ಯವು ಗುರುವಾರ ಸಂಜೆಯ ವೇಳೆಗೆ ಮುಕ್ತಾಯಗೊಂಡಿದ್ದು, ಗುರುವಾರ ರಾತ್ರಿಯಿಂದಲೇ ಚಾರ್ಮಾಡಿ ಘಾಟಿಯಲ್ಲಿ ಕಾರು, ಜೀಪು ಸೇರಿದಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ ಸಕಲೇಶಪುರ ಉಪ ವಿಭಾಗದ ಎಂಜಿನಿಯರ್‌ಗಳು ಘಾಟಿಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಮಳೆಯ ಪ್ರಮಾಣವು ತಗ್ಗಿದ್ದರಿಂದಾಗಿ ಭಾರಿ ಮಳೆಯಿಂದ ತತ್ತರಿಸಿದ್ದ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ.