ಆಲಂಕಾರು: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com
ಕಡಬ, ಜೂ.19. ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಆಲಂಕಾರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಆಲಂಕಾರು ಗ್ರಾಮದ ಶರವೂರು ನಾಡ್ತಿಲ ನಿವಾಸಿ ನಾಗಪ್ಪ ಗೌಡ ಎಂಬವರ ಪತ್ನಿ ಲೀಲಾವತಿ(52ವ.) ಎಂದು ಗುರುತಿಸಲಾಗಿದೆ. ಇವರು ಭಾನುವಾರದಂದು ತನ್ನ ಮಗ ದಿನೇಶ್ ಎಂಬರಿಗೆ ಕರೆ ಮಾಡಿ “ಮನಸ್ಸಿಗೆ ತುಂಬಾ ಬೇಸರವಾಗುತ್ತಿದೆ, ನನಗೆ ಬದುಕಲು ಇಷ್ಟವಿಲ್ಲ ಎಂದು ಹೇಳಿ ತನ್ನ ಮನೆಯಲ್ಲಿ ವಿಷ ಪದಾರ್ಥ ಸೇವಿಸಿದ್ದರು. ವಿಷಯ ತಿಳಿದ ಮನೆಯವರು ಇವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಜೀವನದಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ ಈ ವಿಧಾನವನ್ನು ಅನುಸರಿಸಿ

error: Content is protected !!
Scroll to Top