ಕಡಬ ಗ್ರಾ.ಪಂ. ಮಾಜಿ ಸದಸ್ಯ ಶಬೀರ್ ಪಾಲೆಪ್ಪೆ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜೂ.19. ಕಡಬ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕೋಡಿಂಬಾಳ ಕೋಡಿಂಬಾಳ ರಹಮ್ಮಾನಿಯಾ ಜುಮ್ಮಾ ಮಸೀದಿಯ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಶಬ್ಬೀರ್ ಮಡ್ಯಡ್ಕ ಇಂದು ನಿಧನ ಹೊಂದಿದರು.

ಕಳೆದ ಹಲವು ಸಮಯಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿ ಚಿಕಿತ್ತೆ ಪಡೆದಿದ್ದ ಇವರು ಮಂಗಳವಾರ ಬೆಳಿಗ್ಗೆ ತನ್ನ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮಡ್ಯಡ್ಕದಲ್ಲಿ ದಿನಸಿ ಅಂಗಡಿ ಹೊಂದಿದ್ದ ಇವರು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Also Read  ಡಿಸೆಂಬರ್ 2ರಂದು ವಿಶ್ವ ವಿಕಲಚೇತನರ ದಿನಾಚರಣೆ

error: Content is protected !!
Scroll to Top