(ನ್ಯೂಸ್ ಕಡಬ) newskadaba.com ವಿಟ್ಲ, ಜೂ.19. ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಮಂಗಳವಾರದಂದು ವಿಟ್ಲ ಸಮೀಪದ ಕೊಡಂಗಾಯಿಯಲ್ಲಿ ನಡೆದಿದೆ.

ಮೃತ ಸವಾರನನ್ನು ಪಳಿಕೆ ನಿವಾಸಿ ಮಹಮ್ಮದ್ ಸಫ್ವಾನ್(18) ಎಂದು ಗುರುತಿಸಲಾಗಿದೆ. ಈತ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕೊಡಂಗಾಯಿ ಎಂಬಲ್ಲಿ ಜೀಪು ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಸವಾರ ಸಫ್ವಾನ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ವಿಟ್ಲ ಪೊಲೀಸರು ಪರಿಶೀಲನೆ ನಡೆಸಿದ್ದು, ಜೀಪು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.










