ಮಂಗಳೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂನ್. 20. ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಜೂನ್ 21 ರಂದು ಮಂಗಳಾ ಒಳಾಂಗಣ ಕ್ರೀಡಾಂಗಣ, ಲೇಡಿಹಿಲ್, ಮಂಗಳೂರು ಇಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು.

ಅಂದು ಬೆಳಿಗ್ಗೆ 8 ಗಂಟೆಗೆ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ಉದ್ಘಾಟಿಸುವರು. ಮುಖ್ಯ ಕಾರ್ಯಕ್ರಮದಲ್ಲಿ ಸುಮಾರು 1000 ಜನರು ಭಾಗವಹಿಸುವ ನಿರೀಕ್ಷೆಯಿದ್ದು , ಈಗಾಗಲೇ ವಿವಿಧ ಸಂಸ್ಥೆಗಳು ಹಾಗೂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜುಗಳ ಸಹಯೊಗದೊಂದಿಗೆ ಜಿಲ್ಲೆಯ ವಿವಿದೆಡೆ 5000ಕ್ಕಿಂತಲೂ ಹೆಚ್ಚು ಸಾರ್ವಜನಿಕರಿಗೆ ಯೋಗ ತರಬೇತಿಯನ್ನು ನೀಡಲಾಗಿದೆ.

Also Read  ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ➤ ಯೆಲ್ಲೋ ಅಲರ್ಟ್ ಘೊಷಣೆ

ಸ್ವಚ್ಛ ಮನಸ್ಸು ಹಾಗೂ ಸ್ವಸ್ಥ ಶರೀರಕ್ಕಾಗಿ ವಿಶ್ವದಾದ್ಯಂತ ಭಾರತೀಯ ಜೀವನ ಪದ್ಧತಿಯಾದ ಯೋಗ ಜನಪ್ರಿಯವಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅಂದು ಬೆಳಿಗ್ಗೆ 8 ಗಂಟೆಗೆ ಹಾಜರಾಗಿ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಜಿಲ್ಲಾ ಆಯುಷ್ ಅಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top