ಮೆಲ್ಕಾರ್: ಬುಡ ಸಮೇತ ನೆಲಕ್ಕುರುಳಿದ ಬೃಹತ್ ಗಾತ್ರದ ಮರ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.20. ಹೆದ್ದಾರಿ ಬದಿಯಲ್ಲಿದ್ದ ಬೃಹತ್ ಮರವೊಂದು ಬುಡ ಸಮೇತ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಬುಧವಾರ ಸಂಜೆ ಮೆಲ್ಕಾರ್ ನಲ್ಲಿ ಸಂಭವಿಸಿದೆ.

ಮೃತನನ್ನು ಮೆಲ್ಕಾರ್ ನಲ್ಲಿ ಸಿಮೆಂಟ್ ಆಕೃತಿ ಕೆಲಸ ನಿರ್ವಹಿಸುತ್ತಿದ್ದ ಉತ್ತರ ಪ್ರದೇಶದ ಮೂಲದ ಕಾರ್ಮಿಕ ರಾಮಸೇವಕ್(36) ಎಂದು ಗುರುತಿಸಲಾಗಿದೆ. ಜತೆಯಲ್ಲಿ ಕೆಲಸ ಮಾಡುತ್ತಿದ್ದ ಇನ್ನೋರ್ವ ಕಾರ್ಮಿಕ ದಿಲೀಪ್ ಗಂಭೀರ ಗಾಯಗೊಂಡಿದ್ದು, ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಬುಧವಾರ ಸಂಜೆ ಕೆಲಸ ಮಾಡುತ್ತಿದ್ದಾಗ ಬೀಸಿದ ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಅಶ್ವತ್ಥ ಮರವೊಂದು ಬುಡ ಸಮೇತ ಮಗುಚಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.

Also Read  ಮಂಗಳೂರು: ಅನ್ಯಕೋಮಿನ ತಂಡದಿಂದ ವ್ಯಕ್ತಿಯ ಮೇಲೆ ತಲವಾರು ದಾಳಿ ➤ ವ್ಯಕ್ತಿ ಗಂಭೀರ

error: Content is protected !!