ಮಂಗಳೂರು: ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮ0ಗಳೂರು,ಜೂನ್. 21. ಸಾರ್ವಜನಿಕ ಗ್ರಂಥಾಲಯ ಇಲಾಖಾ ವತಿಯಿಂದ ನಗರ ಕೇಂದ್ರ ಗ್ರಂಥಾಲಯ, ಮಂಗಳೂರಿನಲ್ಲಿ ನಾಲ್ಕು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 40ರಷ್ಟು ಅಂಕಗಳಿಂದ ತೇರ್ಗಡೆಯಾದ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇಕಡ 35ರಷ್ಟು ಅಂಕ) ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ನಗರ ಕೇಂದ್ರ ಗ್ರಂಥಾಲಯ, ಬಾವುಟಗುಡ್ಡೆ, ಮಂಗಳೂರು – 575003, ದೂರವಾಣಿ 0824-2425873 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನ ಎಂದು ಉಪನಿರ್ದೇಶಕರು(ಪ್ರಭಾರ), ನಗರ ಕೇಂದ್ರ ಗ್ರಂಥಾಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top