(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 21. 2018-19 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು.

ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಪಡೆದು ಭರ್ತಿ ಮಾಡಿ ಜೂನ್ 30 ರೊಳಗೆ ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಛೇರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್‍ನ್ನು ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಗೆ ಸಂಪರ್ಕಿಸಲು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
