ಶರತ್ ಮಡಿವಾಳ ಹಂತಕರ ಸೆರೆ…? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.15. ಇತ್ತೀಚೆಗೆ ಬಿ.ಸಿ.ರೋಡ್‍ನಲ್ಲಿ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ವಲಯ ಐಜಿಪಿ ಪಿ. ಹರಿಶೇಖರನ್ ನೇತೃತ್ವದಲ್ಲಿ ಆರು ತನಿಖಾ ತಂಡಗಳನ್ನು ರಚಿಸಲಾಗಿತ್ತು. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳಿಗೆ ತಲುಪಿದೆ.  ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲು ಪೊಲೀಸರು ನಿರಾಕರಿಸಿದ್ದಾರೆ.

Also Read  ರೆಂಜಿಲಾಡಿ ಶಾಲೆಯಲ್ಲಿ ತುಳುನಾಡ ತುಡರ್ ಯುವಕ ಮಂಡಲದ ವತಿಯಿಂದ ಶ್ರಮದಾನ

error: Content is protected !!
Scroll to Top