ನೂಜಿಬಾಳ್ತಿಲ:‌ ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಬಸ್ ► ಅಪಾಯದಿಂದ ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಕಡಬ, ಜೂ.21. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ನೂಜಿಬಾಳ್ತಿಲ ಗ್ರಾಮದ ಪದಕ ತಿರುವಿನಲ್ಲಿ ಗುರುವಾರ ಸಂಜೆ‌ ನಡೆದಿದೆ.

ಬೆಂಗಳೂರಿನ ಕುಟುಂಬವೊಂದು ಖಾಸಗಿ ಬಸ್ಸಿನಲ್ಲಿ ಕುಕ್ಕೇ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ಬೆಂಗಳೂರಿಗೆ ವಾಪಸಾಗುತಿದ್ದ ಸಂದರ್ಭದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಡಬ ಠಾಣಾ ಎಎಸ್‌ಐ ಚಂದ್ರಶೇಖರ್, ಎಚ್‌ಸಿ ನೇತ್ರಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯದಿಂದ ಕಂದಮ್ಮ ಮೃತ್ಯು - ದೂರು ದಾಖಲು

 

ನೂಜಿಬಾಳ್ತಿಲ ಗ್ರಾಮದ ರಾಜ್ಯ ಹೆದ್ದಾರಿ ಹಾದು ಹೋಗುವ ಪದಕ ತಿರುವಿನಲ್ಲಿ ಈ ಹಿಂದಿನಿಂದಲೂ ಹಲವಾರು ಅಪಘಾತಗಳು ಸಂಭವಿಸುತ್ತಲೇ ಇದ್ದು, ವಾರದಲ್ಲಿ ಎರಡು – ಮೂರು ಸಣ್ಣಪುಟ್ಟ ಅಪಘಾತಗಳು ನಡೆಯುತ್ತಲೇ ಇದೆ. ಇಲ್ಲಿ ರಸ್ತೆಯು ತಿರುವು ಹೊಂದಿರುವುದರಿಂದ ಎರಡೂ ಕಡೆಯಿಂದ ಬರಿವ ವಾಹನ ಚಾಲಕರಿಗೆ ದೂರದಿಂದ ಈ ತಿರುವು ಅರಿವಾಗದೆ, ಅಪಘಾತಗಳು ಸಂಭವಿಸುವುದು ಮಾಮೂಲಿಯಾಗಿದೆ. ಈ ಬಗ್ಗೆ ಪಿಡಬ್ಲ್ಯೂಡಿ ಇಲಾಖೆಯವರು ತಿರುವನ್ನು ಸರಿಪಡಿಸಿ ಅಪಘಾತವನ್ನು ತಡೆಗಟ್ಟಲು ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

error: Content is protected !!
Scroll to Top