ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.22. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕುಟುಂಬ ಸಮೇತರಾಗಿ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯಕ್ಕೆ ಗುರುವಾರದಂದು ಭೇಟಿ ನೀಡಿದರು.

ರಾಹುಲ್ ಅವರನ್ನು ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪ್ರಸಾದದೊಂದಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಶ್ರೀ ದೇವಳದ ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥನ್ ನಂಬೀಶ, ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್, ಹರೀಶ್, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಸ್ಥಳೀಯರಾದ ಶಿವಕುಮಾರ್ ಕಾಮತ್ ಮತ್ತು ಲೋಕೇಶ್ ಎನ್.ಎಸ್ ಉಪಸ್ಥಿತರಿದ್ದರು.

ಈ ಸಂದರ್ಭ ಮಾತನಾಡಿದ ಅವರು, ನಾನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಭಕ್ತನಾಗಿದ್ದು, ಕಳೆದ ಹಲವಾರು ವರ್ಷಗಳಿಂದ ನಾನು ಶ್ರೀ ಕ್ಷೇತ್ರಕ್ಕೆ ಬರುತ್ತಿದ್ದೇನೆ. ಕಳೆದ ಮೂರು ತಿಂಗಳ ಹಿಂದೆ ಐಪಿಎಲ್ ಆರಂಭದ ಮೊದಲು ಕ್ಷೇತ್ರಕ್ಕೆ ಆಗಮಿಸಿದ್ದೆ. ಮುಂಬರುವ ಇಂಗ್ಲೆಂಡ್ ಸರಣಿಗಾಗಿ ಅಲ್ಲಿಗೆ ನಾಳೆ ತೆರಳುತ್ತಿದ್ದು, ಅದಕ್ಕೆ ಮುಂಚಿತವಾಗಿ ತಂದೆ ತಾಯಿಯೊಂದಿಗೆ ಕ್ಷೇತ್ರಕ್ಕೆ ಬಂದು ದೇವರ ಆಶೀರ್ವಾದ ಪಡೆದು ಒಳಿತಿಗಾಗಿ ಪ್ರಾರ್ಥಿಸಿದ್ದೇನೆ ಎಂದರು.

Also Read  ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

error: Content is protected !!
Scroll to Top