ಫರಂಗಿಪೇಟೆ: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು



(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರದಂದು ಫರಂಗಿಪೇಟೆಯಲ್ಲಿ ನಡೆದಿದೆ.







ಮೃತ ವ್ಯಕ್ತಿಯನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ಫಾರೂಕ್(45) ಎಂದು ಗುರುತಿಸಲಾಗಿದೆ. ಮಂಗಳೂರು ಬಂದರಿನ ಧಕ್ಕೆಯಲ್ಲಿ ಉದ್ಯೋಗಿಯಾಗಿದ್ದ ಫಾರೂಕ್ ಎಂದಿನಂತೆ ಇಂದು ಮುಂಜಾನೆ ಕೆಲಸಕ್ಕೆ ತೆರಳುವ ಸಮಯ ಹಳಿ ದಾಟುತ್ತಿದ್ದ ವೇಳೆ ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದು ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಇದೇ ದಾರಿಯಿಂದಾಗಿ ತೆರಳುತ್ತಿದ್ದ ಸ್ಥಳೀಯರು ಇವರನ್ನು ಕಂಡು ಆಸ್ಪತ್ರೆಗೆ ದಾಖಲಿಸಿದರಾದರೂ ಅದಾಗಲೇ ಮೃತಪಟ್ಟಿದ್ದರು.






error: Content is protected !!
Scroll to Top