ಆಲಂಕಾರು: ಅಪಘಾತದ ಗಾಯಾಳು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.15. ಏಳು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಕೋಮಾವಸ್ಥೆಯಲ್ಲಿದ್ದ ಗಾಯಳು ಶುಕ್ರವಾರ ತಡ ರಾತ್ರಿ ಸಾವನ್ನಪ್ಪಿದ ಘಟನೆ ಆಲಂಕಾರಿನಲ್ಲಿ ನಡೆದಿದೆ.

ಆಲಂಕಾರು ಗ್ರಾಮದ ನೆಕ್ಕಿಲಾಡಿ ನೋಣಯ್ಯ ಆಚಾರಿ (75) 2016ರ ಡಿಸೆಂಬರ್ 4ರಂದು ಆಲಂಕಾರು ಪೇಟೆಯಲ್ಲಿ ರಸ್ತೆ ದಾಟುವ ಸಂಧರ್ಭದಲ್ಲಿ ಕಡಬ ಕಡೆಯಿಂದ ಬಂದ ದ್ವಿ-ಚಕ್ರ ವಾಹನವೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಕೋಮಾವಸ್ಥೆಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದರು. ಸುಮಾರು ನಾಲ್ಕು ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಚಿಕಿತ್ಸಗೆ ಸಕರಾತ್ಮಕವಾಗಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಮನೆಗೆ ಕಳುಹಿಸಲಾಗಿತ್ತು. ಕಳೆದ ಮೂರು ತಿಂಗಳು ಮನೆಯಲ್ಲಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಇವರು ಶುಕ್ರವಾರ ಕೊನೆಯುಸಿರೆಳೆದರು. ಮೃತರು ಪತ್ನಿ, ಇಬ್ಬರು ಪುತ್ರ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

Scroll to Top