ಪಂಪ್‌ವೆಲ್‌: ವೇಶ್ಯಾವಾಟಿಕೆ ದಂಧೆಯ ದೂರಿನಂತೆ ಪೊಲೀಸ್ ದಾಳಿ ► ಹಲವರ ಬಂಧನ, ಆರು ಮಂದಿ ಯುವತಿಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ವೇಶ್ಯಾವಾಟಿಕೆ ದಂಧೆಯಲ್ಲಿ ನಿರತರಾಗಿದ್ದ ಆರೋಪದಲ್ಲಿ ಪಂಪ್‌ವೆಲ್‌ನಲ್ಲಿರುವ ಲಾಡ್ಜ್‌ವೊಂದಕ್ಕೆ ದಾಳಿ ನಡೆಸಿರುವ ಪೊಲೀಸರು ಹಲವರನ್ನು ವಶಕ್ಕೆ ಪಡೆದ ಘಟನೆ ಶುಕ್ರವಾರದಂದು ನಡೆದಿದೆ.

ಪಂಪ್‌ವೆಲ್‌ನಲ್ಲಿರುವ ಅನ್ನಪೂರ್ಣ ಹೊಟೇಲ್ ಹಾಗೂ ಲಾಡ್ಜ್‌ನ 3 ನೇ ಮಹಡಿಯ ರಹಸ್ಯ ಕೊಠಡಿಯಲ್ಲಿ ಯುವತಿಯರನ್ನು ಕೂಡಿ ಹಾಕಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂದು ಮೈಸೂರು ಒಡನಾಡಿ ಸಂಘ ಹಾಗೂ ಚೈಲ್ಡ್ ಲೈನ್ ಸಂಸ್ಥೆ ನೀಡಿದ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು ಆರು ಮಂದಿ ಬಾಂಗ್ಲಾ ಮೂಲದ ಯುವತಿಯರನ್ನು ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ನಿವಾಸಿ ಪವನ್(26) ಎಂಬಾತ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ ಶಿವರಾಮ ಪೂಜಾರಿ ಎಂಬಾತ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Also Read  ಜೂ.01 ರಿಂದ 61 ದಿನಗಳ ಕಾಲ ಮೀನುಗಾರಿಕೆಗೆ ನಿಷೇಧ

error: Content is protected !!
Scroll to Top