ಬಿಳಿನೆಲೆ: ಚಲಿಸುತ್ತಿದ್ದ ಕಾರಿನ ಮೇಲೆ ಕಾಡಾನೆ ದಾಳಿ ► ಮುಂದೇನಾಯ್ತು ಗೊತ್ತೇ..?

(ನ್ಯೂಸ್ ಕಡಬ) newskadaba.com ಕಡಬ, ಜೂ.23. ಕಾಡಾನೆಯೊಂದು ಕಾರಿಗೆ ಸೊಂಡಿಲಿನಿಂದ ಹೊಡೆದ ಪರಿಣಾಮ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ಓರ್ವ ಗಂಭೀರ ಗಾಯಗೊಂಡು, ಆರು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಯಲ್ಲಿ ಶನಿವಾರ ಮುಂಜಾನೆ ನಡೆದಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಮಾರುತಿ ಓಮ್ನಿ ಕಾರು ಬಿಳಿನೆಲೆ ಸಿಪಿಸಿಆರ್ಐ ಸಮೀಪ ತಲುಪಿದಾಗ ಕಾಡಾನೆ ರಸ್ತೆಯನ್ನು ಹಾದುಹೋಗುತ್ತಿದ್ದುದನ್ನು ಕಂಡ ಚಾಲಕ ಆನೆಯ ಸಮೀಪದಲ್ಲೇ ಕಾರನ್ನು ನಿಲ್ಲಿಸಿದ್ದರೆನ್ನಲಾಗಿದೆ. ಈ ಸಂದರ್ಭದಲ್ಲಿ ಕಾಡಾನೆಯು ಹಿಂತಿರುಗಿ ಬಂದು ಸೊಂಡಿಲಿನಿಂದ ಕಾರಿಗೆ ಹಾನಿಯುಂಟು ಮಾಡಿದೆ. ಈ ಸಂದರ್ಭದಲ್ಲಿ ಬಸ್ಸೊಂದು ಹಾರ್ನ್ ಹಾಕುತ್ತಾ ಬಂದ ಕಾರಣ ಕಾಡಾನೆ ಕಾರನ್ನು ಬಿಟ್ಟು ಓಡಿ ಹೋಗಿದ್ದರಿಂದ ಸಂಭಾವ್ಯ ಅನಾಹುತ ತಪ್ಪಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದು, ಇನ್ನುಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

error: Content is protected !!

Join the Group

Join WhatsApp Group