ಪೆರ್ನೆ: ಖಾಸಗಿ ಬಸ್ – ಕಾರು ಮುಖಾಮುಖಿ ಢಿಕ್ಕಿ ► ಹಲವರಿಗೆ ಗಾಯ

 ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆಯಲ್ಲಿ ಭಾನುವಾರ ಸಂಜೆ ನಡೆದಿದೆ.

ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ರಾಜಶ್ರೀ ಹೆಸರಿನ ಖಾಸಗಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಸುತ್ತಿದ್ದ ಸ್ವಿಫ್ಟ್ ಕಾರು ನಡುವೆ ಪೆರ್ನೆಯ ದೋರ್ಮೆ ಮಸೀದಿ ಬಳಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

Also Read  ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತ್ಯು..!

error: Content is protected !!
Scroll to Top