ಆಲಂಕಾರು :ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಂತರಿಕ ಲೆಕ್ಕ ಪರಿಶೋಧಕ ಕೆ. ಸುಬ್ರಹ್ಮಣ್ಯ ಭಟ್ ಶೇಡಿಗುಂಡಿ ನಿಧನ

(ನ್ಯೂಸ್ ಕಡಬ) newskadaba.com ಆಲಂಕಾರು, ಜೂ. 25. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಂತರಿಕ ಲೆಕ್ಕ ಪರಿಶೋಧಕ ಕೆ. ಸುಬ್ರಹ್ಮಣ್ಯ ಭಟ್ ಶೇಡಿಗುಂಡಿ(55) ಆದಿತ್ಯವಾರ ಸಂಜೆ ಸ್ವ-ಗೃಹದಲ್ಲಿ ನಿಧನ ಹೊಂದಿದದರು. ಮೃತರು ಕಳೆದ ಹಲವು ವರ್ಷಗಳಿಂದ ಮೂತ್ರ ಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರಗತಿಪರ ಕೃಷಿಕರೂ ಆಗಿದ್ದ ಇವರುಗಳು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನಲ್ಲಿ ಕಳೆದ 24 ವರ್ಷಗಳಿಂದ ಆಂತರಿಕ ಲೆಕ್ಕ ಪರಿಶೋಧಕರಾಗಿ ಸೇವೆ ಸಲ್ಲಿಸುತ್ತಿದ್ದರು. 

1996ರಲ್ಲಿ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಗುಮಾಸ್ತರಾಗಿ ಸೇವೆ ಪ್ರಾರಂಭಿಸಿದ್ದರು. ಬಳಿಕದ ದಿನಗಳಲ್ಲಿ ಸಂಘದ ವಿವಿಧ ಹುದ್ದೆಯನ್ನು ಯಶಸ್ವಿಯಾಗಿ ನಿರ್ವಹಿದ್ದ ಇವರು ಅತ್ಯಂತ ಜನಪ್ರೀಯ ಸಿಬ್ಬಂದಿ ಎಂದೆನಿಕೊಂಡಿದ್ದರು. ಕಳೆದ ಕೆಲವು ತಿಂಗಳಿನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆಗೆ ಸಕರಾತ್ಮಕವಾಗಿ ಸ್ಪಂದಿಸ ಕಾರಣ ಶನಿವಾರ ಮನೆಗೆ ಕರೆ ತರಲಾಗಿತ್ತು. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಮೃತರ ಮನೆಗೆ ಸಂಘದ ಅಧ್ಯಕ್ಷ ರಮೇಶ್ ಭಟ್ ಉಪ್ಪಂಗಳ, ಉಪಾಧ್ಯಕ್ಷ ರಮೇಶ್.ಎನ್.ಸಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಯಾನಂದ ರೈ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಮುತ್ತಪ್ಪ ಪೂಜಾರಿ ನೈಯ್ಯಲ್ಗ ಹಾಗೂ ಸಂಘದ ಎಲ್ಲಾ ನಿರ್ದೇಶಕರು ಸಿಬ್ಬಂದಿಗಳು ಮತ್ತು ಆಲಂಕಾರು  ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಆಲಂಕಾರು ಮೊದಲಾದವರು ಭೇಟಿ ನೀಡಿ ಶ್ರದ್ದಾಂಜಲಿ ಅರ್ಪಿಸಿದರು.

Also Read  10ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಡಬದ ಯುವಕ ಅರೆಸ್ಟ್

error: Content is protected !!
Scroll to Top