ಬಂಟ್ವಾಳ: ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.26. ಯುವತಿಯೋರ್ವಳು ತನ್ನ ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಬಂಟ್ವಾಳದ ದಡ್ಡಲಕಾಡು ಎಂಬಲ್ಲಿ ಸೋಮವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಬಂಟ್ವಾಳ ತಾಲೂಕಿನ ದಡ್ಡಲಕಾಡು ನಿವಾಸಿ ಪವಿತ್ರಾ‌(20) ಎಂದು ಗುರುತಿಸಲಾಗಿದೆ. ತಂದೆ ತಾಯಿ ಇಲ್ಲದೆ ಅನಾಥೆಯಾಗಿದ್ದ ಪವಿತ್ರಾ ತನ್ನ ಅಜ್ಜಿಯ ಜೊತೆಗೆ ವಾಸ ಮಾಡಿಕೊಂಡಿದ್ದು ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿದೆ. ಸೋಮವಾರದಂದು ಅಡುಗೆ ಕೋಣೆಯಲ್ಲಿ ಮೈಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

error: Content is protected !!
Scroll to Top