ಮತ್ತೆ ಮುಳುಗಿದ ಹೊಸ್ಮಠ ಸೇತುವೆ ► ಉಪ್ಪಿನಂಗಡಿ – ಕಡಬ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಕಡಬ, ಜೂ.28. ಘಟ್ಟದ ತಪ್ಪಲಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಡಬ ಸಮೀಪದ ಹೊಸಮಠ ಮುಳುಗು ಸೇತುವೆಯು ಗುರುವಾರ ಮಧ್ಯಾಹ್ನದ ಬಳಿಕ ಮತ್ತೆ ಮುಳುಗಡೆಯಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಕಳೆದ ಕೆಲವು ದಿನಗಳಿಂದ ಕಡಬ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರ ಪರಿಣಾಮ ನದಿ, ಹಳ್ಳ, ಹೊಳೆಗಳು ತುಂಬಿ ಹರಿಯತೊಡಗಿವೆ. ಗುರುವಾರ ಬೆಳಿಗ್ಗೆಯಿಂದಲೇ ಕಡಬ ಸಮೀಪದ ಹೊಸ್ಮಠದಲ್ಲಿ ಗುಂಡ್ಯ ಹೊಳೆಗೆ ನಿರ್ಮಾಣವಾಗಿದ್ದ ಮುಳುಗು ಸೇತುವೆಯ ಅಂಚಿಗೆ ನೀರು ಹೊಡೆಯುತ್ತಿತ್ತಾದರೂ ಮಧ್ಯಾಹ್ನ ವೇಳೆಗೆ ಮುಳುಗಡೆಯಾಗಿದೆ. ಘಾಟ್ ತಪ್ಪಲಿನಲ್ಲಿ ಮಳೆಯ ಅಬ್ಬರ ತೀವ್ರಗೊಂಡ ಪರಿಣಾಮ ನದಿಯಲ್ಲಿ‌ನೀರಿನ ಹರಿವು ಹೆಚ್ಚಾಗಿದೆ.

Scroll to Top