(ನ್ಯೂಸ್ ಕಡಬ) newskadaba.com ಆಲಂಕಾರು,ಜು.04.ವಿದ್ಯಾರ್ಥಿ ಜೀವನದ ನಿಷ್ಠೆ ಪ್ರಾಮಾಣಿಕತೆ ಭವಿಷ್ಯದ ಬದುಕಿಗೆ ಭದ್ರ ಬುನಾದಿಯನ್ನು ಹಾಕಿಕೊಡುತ್ತದೆ ಎಂದು ವಿಟ್ಲ ಆರಕ್ಷಕ ಠಾಣೆಯ ಸಿಬ್ಬಂದಿ ಗಣೇಶ್ ರೈ ನುಡಿದರು. ಅವರು ಆಲಂಕಾರು ಶ್ರೀ ದುರ್ಗಾಂಬ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಉದ್ಟಾಟಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿ ಜೀವನವು ಪ್ರತಿಯೊಬ್ಬರ ಬದುಕಿನ ಮರೆಯಾಗಲಾಗದ ಒಂದು ಅದ್ಯಾಯನ. ಇಲ್ಲಿ ಒಂದು ಕಪ್ಪು ಬಂದರೂ ಇದರ ಪರಿಣಾಮ ಜೀವನ ಪರ್ಯಂತ ಅನುಭವಿಸ ಬೇಕಾಗುತ್ತದೆ. ನಮ್ಮ ಬದುಕನ್ನು ನಾವೇ ರೂಪಿಸಲು ಕಾಲೇಜು ವಿದ್ಯಾರ್ಥಿ ದೆಸೆಯಿಂದಲೇ ಜವಾಬ್ದಾರಿಯುತರಾಗಬೇಕು. ವಿದ್ಯಾರ್ಥಿ ಸಂಘಟನೆ ಭವಿಷ್ಯದಲ್ಲಿ ಸಾಮಾಜಿಕ ಸಂಘಟಿತ ಜೀವನ ನಡೆಸಲು ಪೂರಕವಾಗಲಿದೆ ಎಂದರು.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಯಂ.ದಯಾನಂದ ರೈ ಮನವಳಿಕೆಯರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿ ಈಶ್ವರ ಗೌಡ ಪಜ್ಜಡ್ಕ, ಸದಸ್ಯರಾದ ಮುತ್ತಪ್ಪ ಪೂಜಾರಿ ನೆಯ್ಯಲ್ಗ ರಾಮರಾಜ ನಗ್ರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭಹಾರೈಸಿದರು. ಪ್ರೌಢ ಶಾಲಾ ವಿಭಾಗದ ಮುಖ್ಯಸ್ಥರಾದ ಸತ್ಯನಾರಾಯಣ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.. ಕಾಲೇಜಿನ ಪ್ರಾಂಶುಪಾಲರಾದ ನವೀನ್ ರೈ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕಿ ರೂಪಾ ಕಾರ್ಯಕ್ರಮ ನಿರೂಪಿಸಿ ಕನ್ನಡ ಉಪನ್ಯಾಸಕಿ ರೂಪಾ .ಜೆ ರೈ ವಂದಿಸಿದರು. ಕಾಲೇಜಿನ ಭೋದಕ ಭೋದಕೇತರ ಸಿಬ್ಬಂದಿಗಳು ಸಹಕರಿಸಿದರು.