ಸುಳ್ಯ: ಬಿಡಿಎಸ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು.04. ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಸುಳ್ಯದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಸುಳ್ಯದ ಕೆವಿಜಿ ದಂತ ಮಹಾ ವಿದ್ಯಾಲಯದ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿನಿ, ಮೈಸೂರು ನಗರದ ಗುರುರಾಜ ಬಡಾವಣೆ ನಿವಾಸಿ ರಮೇಶ್ ಎಂಬವರ ಪುತ್ರಿ ಸುಮಾ(19) ಎಂದು ಗುರುತಿಸಲಾಗಿದೆ. ಈಕೆ ವಾರ್ಷಿಕ ಪರೀಕ್ಷೆಯನ್ನು ಸರಿಯಾಗಿ ಬರೆದಿಲ್ಲ ಎಂದು ಜಿಗುಪ್ಸೆಗೊಂಡು ಮನನೊಂದು ಬುಧವಾರದಂದು ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು ಚೂಡಿದಾರದ ವೇಲ್ ನಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಯ ತಂದೆ ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top