ಮಂಗಳೂರು: ಉಪನ್ಯಾಸಕರಿಗೆ ಹೊಸ ಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಪದವಿಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗೆ ಹೊಸಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರವನ್ನು ನಡೆಸಿರುತ್ತದೆ. ಪ್ರಸ್ತುತ ದ.ಕ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಅನುದಾನರಹಿತ ವಾಣಿಜ್ಯಶಾಸ್ತ್ರ ಉಪನ್ಯಾಸಕರು ಮತ್ತು ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಹೊಸಪಠ್ಯಕ್ರಮದ ಬಗ್ಗೆ ತರಬೇತಿಯ ಅಗತ್ಯತೆಯನ್ನು ಮನಗಂಡು ಪದವಿಪೂರ್ವ ಶಿಕ್ಷಣ ಇಲಾಖೆಯ ಮಾರ್ಗದರ್ಶನದಲ್ಲಿ ಶ್ರೀ ಚೈತನ್ಯ ಪ.ಪೂ ಕಾಲೇಜು ಮಂಗಳೂರು, ದ.ಕ ಜಿಲ್ಲಾ ಪಪೂ ಕಾಲೇಜುಗಳ ಪ್ರಾಚಾರ್ಯರ ಸಂಘ ಹಾಗೂ ದ.ಕ ಜಿಲ್ಲೆ ಪದವಿ ಪೂರ್ವ ಕಾಲೇಜುಗಳ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಅನುದಾನರಹಿತ ವಾಣಿಜ್ಯಶಾಸ್ತ್ರ ಉಪನ್ಯಾಸಕರು ಮತ್ತು ಸರಕಾರಿ ಪಪೂ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಹೊಸಪಠ್ಯಕ್ರಮದ ಬಗ್ಗೆ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಜುಲೈ 9 ಮತ್ತು10 ರಂದು ಶ್ರೀ ಚೈತನ್ಯ ಪದವಿಪೂರ್ವ ಕಾಲೇಜು, ಕೊಟ್ಟಾರ ಚೌಕಿ, ಮಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.

ವಾಣಿಜ್ಯಶಾಸ್ತ್ರ ವಿಷಯವನ್ನು ಬೋಧಿಸುವ ಉಪನ್ಯಾಸಕರು ಈ ತರಬೇತಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಉಪನಿರ್ದೆಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ, ದ.ಕ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

 

 

error: Content is protected !!

Join the Group

Join WhatsApp Group