ನೇರಳಕಟ್ಟೆ: ಬೈಕ್ – ಕ್ಯಾಂಟರ್ ಢಿಕ್ಕಿ ► ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.05. ಬೈಕ್ ಹಾಗೂ ಕ್ಯಾಂಟರ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಎಂಬಲ್ಲಿ ಗುರುವಾರದಂದು ನಡೆದಿದೆ.

ಘಟನೆಯಲ್ಲಿ ಬೈಕಿನಲ್ಲಿ ಸಂಚರಿಸುತ್ತಿದ್ದ ಪಾಟ್ರಕೋಡಿ ನಿವಾಸಿಗಳಾದ ಬಿಲಾಲ್ ಮತ್ತು ಅಲ್ತಾಫ್ ಎಂಬವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಈಚರ್ ಲಾರಿ ನಡುವೆ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಮುಖಾಮುಖಿ ಢಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.

error: Content is protected !!

Join the Group

Join WhatsApp Group