ಮುಡಿಪು: ಕಾರು – ಲಾರಿ ಢಿಕ್ಕಿ ► ಮೂವರಿಗೆ ಗಾಯ



(ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ಓಮ್ನಿ ಕಾರು ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಮುಡಿಪು – ಮೆಲ್ಕಾರ್ ರಸ್ತೆಯ ಕಾಯರ್ಗೋಳಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.







ಘಟನೆಯಲ್ಲಿ ಕಾರು ಚಾಲಕ ಸಿಕಂದರ್ ಎಂಬವರು ಗಂಭೀರ ಗಾಯಗೊಂಡಿದ್ದು, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮಕ್ಕಳಿಬ್ಬರಿಗೂ ಗಾಯಗಳಾಗಿದ್ದು, ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮೆಲ್ಕಾರ್ ನಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಢಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.






error: Content is protected !!
Scroll to Top