(ನ್ಯೂಸ್ ಕಡಬ) newskasaba.com ಆಲಂಕಾರು,ಜು.06. ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ರಾಮಕುಂಜ ಇದರ ವತಿಯಿಂದ 2018-19ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಪ್ರಥಮ ಪೋಷಕರ ಸಭೆ ಶಾಲಾ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಗಿ ಆಗಮಿಸಿದ ನಿವೃತ್ತ ದೈಹಿಕ ಶಿಕ್ಷಕ ಗೋಪಾಲ್ ಶೆಟ್ಟಿ ಕಳೆಂಜ ಮಾತನಾಡಿ ಕೇವಲ ಶಿಕ್ಷೆಯಿಂದ ಶಿಕ್ಷಣದಲ್ಲಿ, ಬದಲಾಗಿ ವಿದ್ಯಾರ್ಥಿಗಳ ತಪ್ಪನ್ನು ಮನವರಿಕೆ ಮಾಡಿ ಬೆನ್ನು ತಟ್ಟಬೇಕು. ಹಿರಿಯರ ಮತ್ತು ಶಿಕ್ಷಕರ ನಡವಳಿಕೆಯಲ್ಲಿ ವಿದ್ಯಾರ್ಥಿಗಳ ನಿಜವಾದ ಕೋಪಿ ಪುಸ್ತಕ ಎಂದು ಹೆತ್ತವರ ಹಾಗೂ ಶಿಕ್ಷಕರ ಶೈಕ್ಷಣಿಕ ಜವಾಬ್ದಾರಿಗಳನ್ನು ಮಾರ್ಮಿಕವಾಗಿ ನುಡಿದರು.
ನಂತರ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಮಾತನಾಡಿ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಇದೇ ವೇಳೆ 2018-19ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘವನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಪ್ರದೀಪ್, ಉಪಾಧ್ಯಕ್ಷರಾಗಿ ಪುರಂದರ್.ಕೆ, ಸೌಮ್ಯಶ್ರೀ.ಎಸ್.ಪಿ. ಜೊತೆ ಕಾರ್ಯದರ್ಶಿಯಾಗಿ ಪ್ರತಾಪ್ಚಂದ್ರ.ರೈ ಆಯ್ಕೆಗೊಂಡರು. ಸಹಶಿಕ್ಷಕ ವೆಂಕಟೇಶ್ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಗಾಯಿತ್ರಿ,ಯು.ಎನ್, ತಾಲೂಕು ಪಂಚಾಯತ್ ಸದಸ್ಯೆ ತೇಜಸ್ವಿನಿ ಕಟ್ಟಪುಣಿ, ಆಡಳಿತಾಧಿಕಾರಿ ಆನಂದ್.ಎಸ್.ಟಿ, ಹಾಗೂ ಶಿಕ್ಷಕರು, ಸಂಸ್ಥೆಯ ಸಿಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು.