ಮತ್ತೆ ಮುಳುಗಿದ ಹೊಸ್ಮಠ ಸೇತುವೆ ► ಉಪ್ಪಿನಂಗಡಿ – ಕಡಬ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಕಡಬ, ಜು.11. ಮುಳುಗು ಸೇತುವೆಯೆಂದೇ ಕುಖ್ಯಾತಿಯನ್ನು ಪಡೆದಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆಯು ಬುಧವಾರದಂದು ಮತ್ತೆ ಮುಳುಗಡೆಯಾಗಿ ರಸ್ತೆ ತಡೆ ಉಂಟಾಗಿದೆ.

ಪ್ರಸಕ್ತ ವರ್ಷದಲ್ಲಿ ಸೇತುವೆಯು ಹಲವು ಬಾರಿ ಮುಳುಗಡೆಗೊಂಡು ಸಂಚಾರದಲ್ಲಿ ವ್ಯತ್ಯಯವುಂಟಾಗಿ ಉಪ್ಪಿನಂಗಡಿ, ಸುಬ್ರಹ್ಮಣ್ಯ ಪರಿಸರಕ್ಕೆ ಸಂಪರ್ಕ ಕಡಿತಗೊಂಡಿತ್ತು. ಹಳೆಯ ಸೇತುವೆಯ ಪಕ್ಕದಲ್ಲೇ ನೂತನ ಸೇತುವೆ ನಿರ್ಮಾಣವಾಗುತ್ತಿದೆಯಾದರೂ ಕಾಮಗಾರಿ ಅಪೂರ್ಣದಿಂದಾಗಿ ಈ ವರ್ಷವೂ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ.

Scroll to Top