(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.12.ರಾಜ್ಯ ಯುವ ಬರಹಗಾರರ ಒಕ್ಕೂಟ (ರಿ) ದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಟಿವಿ ಪತ್ರಕರ್ತ ಶಂಶೀರ್ ಬುಡೋಳಿ ನೇಮಕಗೊಂಡಿದ್ದಾರೆ. ಇವರನ್ನ ನೇಮಕಗೊಳಿಸಿ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಹೂಹಳ್ಳಿ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ಶಂಶೀರ್ ಬುಡೋಳಿ ಲೇಖಕ, ಕವಿಯೂ ಹೌದು. 2007 ರಲ್ಲಿ ನಡೆದ 11 ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿದ್ದರು. ಇವರ ಕವನಗಳು ನಾಲ್ಕು ಕವನ ಸಂಕಲನಗಳಲ್ಲಿ ಪ್ರಕಟಗೊಂಡಿದೆ.
