ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಮೇಲಿನ ಹಲ್ಲೆಗೆ ಶ್ರೀರಾಮ ಸೇನೆ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಜು.16. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ಬಿಜೆಪಿ ಮುಖಂಡ ರಮೇಶ್ ಭಟ್ ಕಲ್ಪುರೆಗೆ ತಂಡವೊಂದು ಹಲ್ಲೆ ನಡೆಸಿದ ಘಟನೆಯನ್ನು ಕಡಬ ತಾಲೂಕು ಶ್ರೀರಾಮ ಸೇನೆಯು ಖಂಡಿಸಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಶ್ರೀರಾಮ ಸೇನೆಯ ಕಡಬ ತಾಲೂಕು ಅಧ್ಯಕ್ಷ ಗೋಪಾಲ ನಾಯ್ಕ್ ಮೇಲಿನಮನೆ, ಹಿಂದೂಗಳ ಮೇಲೆ ಅಲ್ಲಲ್ಲಿ ಹಲ್ಲೆ ಘಟನೆಗಳು ನಡೆಯುತ್ತಿದ್ದು, ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ಇನ್ನುಳಿದ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದಿದ್ದಾರೆ.
Scroll to Top