ಒತ್ತಾಯಪೂರ್ವಕ ಬಂದ್ ಗೆ ಕಾನೂನಿನಲ್ಲಿ ಅವಕಾಶವಿಲ್ಲ ► ಕಡಬ ಠಾಣಾ ಉಪ ನಿರೀಕ್ಷಕರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.17. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಸೋಮವಾರದಂದು ಕಡಬ ಬಂದ್ ಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಯ ಪ್ರಮುಖರು ಕರೆ ನೀಡಿದ್ದು, ಕಡಬ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಬಂದ್ ಮಾಡುವಂತೆ ಮನವಿ ಮಾಡಿದ್ದಾರೆ.

ಇನ್ನೊಂದೆಡೆ SDPI ಪಕ್ಷದ ಪ್ರಮುಖರು ಸೋಮವಾರದಂದು ಕಡಬ ಪೇಟೆಯನ್ನು ಬಂದ್ ಮಾಡದಂತೆ ಅಂಗಡಿ ಮಾಲೀಕರಲ್ಲಿ ವಿನಂತಿಸಿಕೊಂಡಿದ್ದು ಸಾರ್ವಜನಿಕರನ್ನು ಗೊಂದಲಕ್ಕೀಡುಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಪ್ರಕಾಶ್ ದೇವಾಡಿಗ, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅಹಿತಕರ ಘಟನೆಗಳು ನಡೆದ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಆದುದರಿಂದ ಒತ್ತಾಯಪೂರ್ವಕವಾಗಿ ಬಂದ್ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಸ್ವಯಂ ಪ್ರೇರಣೆಯಿಂದ ಬಂದ್ ಮಾಡುವವರಿಗೆ ಮಾಡಬಹುದು. ಅಲ್ಲದೆ ಕಡಬ ಪರಿಸರದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದಿದ್ದಾರೆ.

Also Read  ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ► ಸರ್ ಸಿ.ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

error: Content is protected !!
Scroll to Top