ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಜು.19. ಹೊಟ್ಟೆನೋವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ರತ್ರೆಯಲ್ಲಿ ನಿಧನರಾಗಿದ್ದಾರೆ.

ಸೋಮವಾರದಂದು ಶಿರೂರು ಮೂಲ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿಗೆ ಹೊಟ್ಟೆನೋವು ಕಾಣಿಸಿಕೊಂಡು ವಿಪರೀತ ವಾಂತಿ ಮಾಡಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯವರನ್ನು ಬುಧವಾರದಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Also Read  ಆಲಂಕಾರು: ಎಂಡೋ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ

error: Content is protected !!
Scroll to Top