ನಾಳೆ ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ತರ ಪೂರ್ವ ತಯಾರಿ ಸಭೆ

(ನ್ಯೂಸ್ ಕಡಬ) newskadaba.com ಆಲಂಕಾರು, ಜು.21. 2019ರಲ್ಲಿ ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಶತಮಾನೋತ್ಸವ ಆಚರಿಸಲಿದ್ದು ಇದರ ಬಗ್ಗೆ ಪೂರ್ವ ತಯಾರಿ ಸಬೆಯು ಜು.22 ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ಶಾಲಾ ಸಭಾಭವನದಲ್ಲಿ ನಡೆಯಲಿದೆ.

ಇದೇ ವೇಳೆ ಇಲ್ಲಿನ ಹಿರಿಯ ವಿದ್ಯಾರ್ಥಿಗಳು ಶಾಲಾಭಿವೃದ್ದಿ ಸಮಿತಿಯ ಸದಸ್ಯರು, ಪೊಷಕರು, ಊರ ವಿದ್ಯಾಭಿಮಾನಿಗಳ ಸಮ್ಮುಖದಲ್ಲಿ ಶತಮಾನೋತ್ಸವ ಸಮಿತಿಯ ರಚನೆಯನ್ನು ಮಾಡಲಿದ್ದು, ಈ ಪೂರ್ವಭಾವಿ ಸಭೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಸೇರಿದಂತೆ ಸಂಬಂಧಪಟ್ಟವರು ಭಾಗವಹಿಸುವಂತೆ ಶಾಲೆಯ ಪ್ರಕಟಣೆ ತಿಳಿಸಿದೆ.

Also Read 

error: Content is protected !!
Scroll to Top