(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.21. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡವೊಂದು ಕುಸಿದ ಪರಿಣಾಮ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ತಡೆಯುಂಟಾದ ಘಟನೆ ಶನಿವಾರ ಸಂಜೆ ನೆಲ್ಯಾಡಿಯಲ್ಲಿ ನಡೆದಿದೆ.
ಬಿಸಿರೋಡಿನಿಂದ ಅಡ್ಡಹೊಳೆಯವರೆಗೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಶನಿವಾರ ಸಂಜೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಹೆದ್ದಾರಿ ಅಂಚಿನ ಗುಡ್ಡವು ಕುಸಿತವುಂಟಾಗಿ ಹೆದ್ದಾರಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ ಹೆದ್ದಾರಿಯ ಎರಡೂ ಕಡೆಗಳಲ್ಲಿ ಮೈಲುಗಟ್ಟಳೆ ವಾಹನಗಳು ಸರತಿ ಸಾಲಿನಲ್ಲಿ ನಿಂತಿದೆ. ಹೆದ್ದಾರಿಗೆ ಬಿದ್ದ ಮಣ್ಣಿನ ತೆರವು ಕಾರ್ಯವನ್ನು ಗುತ್ತಿಗೆದಾರ ಕಂಪೆನಿಯ ಸಿಬ್ಬಂದಿಗಳು ಯಂತ್ರೋಪಕರಣ ಮೂಲಕ ತೆರವುಗೊಳಿಸುತ್ತಿದ್ದಾರೆ.