ಜಿಲ್ಲೆಯ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ

(ನ್ಯೂಸ್ ಕಡಬ) newskadaba.com ಕಡಬ, ಜು.17. ಜಿಲ್ಲೆಯ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಅಂತಹವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಅವರು ಸೋಮವಾರದಂದು ಕಡಬಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡ ಮೇಲೆ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅಹಿತಕರ ಘಟನೆಗಳು ನಡೆಯುತ್ತಿದ್ದು, ಶಾಂತಿ ಕದಡುವವರ ಮೇಲೆ ಕಠಿಣ ಕಾನೂನು ಕ್ರಮ ಜರಗಿಸಲಾಗುತ್ತದೆ. ಕಡಬದಲ್ಲಿ ಭಾನುವಾರದಂದು ಪೂರ್ವದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿತ್ತಾದರೂ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದೀಗ ಕಡಬದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದರು. ಕಡಬ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಕೊರತೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಸ್ಪಿಯವರು, ಸಿಬ್ಬಂದಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಮುಂದಿನ ಒಂದೆರಡು ತಿಂಗಳಲ್ಲಿ ಈ ಬಗ್ಗೆ  ಕ್ರಮ ಕೈಗೊಳ್ಳಲಾಗುವುದು ಎಂದರು.

error: Content is protected !!
Scroll to Top