ಇಂದು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಸವಣೂರಿನಲ್ಲಿ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು.24. ಇಲ್ಲಿನ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಸವಣೂರು ವಿದ್ಯಾರಶ್ಮಿ ಪದವಿ ಕಾಲೇಜಿನಲ್ಲಿ ಮಂಗಳವಾರದಂದು ನಡೆಯಲಿದೆ.

ಪುತ್ತೂರು ಸಹಾಯಕ ಆಯುಕ್ತ ಕೃಷ್ಣ ಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಭೆಯ ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ವಹಿಸಲಿದ್ದಾರೆ. ಮಂಗಳೂರು ಉದಯವಾಣಿ ದಿನಪತ್ರಿಕೆಯ ಬ್ಯೂರೋ ಚೀಪ್ ಮನೋಹರ ಪ್ರಸಾದ್ ಪ್ರಧಾನ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ, ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನಿ ಎಲ್.ಶೆಟ್ಟಿ ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೆ. ಸೀತಾರಾಮ ರೈ ಸವಣೂರು ಹಾಗೂ ಮನೋಹರ್ ಪ್ರಸಾದ್ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಗುವುದು ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್.ಬಾಲಕೃಷ್ಣ ಕೊಲ ಪ್ರ.ಕಾರ್ಯದರ್ಶಿ ನಾಗರಾಜ್ ಎನ್.ಕೆ ತಿಳಿಸಿದ್ದಾರೆ.

Also Read  ಜಿಲ್ಲಾ ಗೃಹರಕ್ಷದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ

error: Content is protected !!
Scroll to Top