ಪುತ್ತೂರು: ಗೂಡ್ಸ್ ಲಾರಿ – ಖಾಸಗಿ ಬಸ್ ಢಿಕ್ಕಿ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.27. ಗೂಡ್ಸ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸಂಟ್ಯಾರಿನಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಎಸ್ ಆರ್ ಎಸ್ ಕಂಪೆನಿಗೆ ಸೇರಿದ ಖಾಸಗಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ವಿಜಯಲಕ್ಷ್ಮಿ ಕಾರ್ಗೋ ಸರ್ವೀಸ್ ಸಂಸ್ಥೆಗೆ ಸೇರಿದ ಗೂಡ್ಸ್ ಲಾರಿಯ ನಡುವೆ ಸಂಟ್ಯಾರ್ ಬಳಿ ಮುಖಾಮುಖಿ ಢಿಕ್ಕಿಯಾಗಿ ಲಾರಿ ಚಾಲಕ ರಾಜೇಶ್ ಗಂಭೀರವಾಗಿ ಗಾಯಗೊಂಡಿದ್ದು, ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Also Read  ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ - ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

error: Content is protected !!
Scroll to Top