ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರ ಬಯಲಿಗೆಳೆದ ಪ್ರಕರಣ ► ಡಿಐಜಿ ರೂಪಾ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.17. ಇತ್ತೀಚಿಗೆ ರಾಜ್ಯದಲ್ಲಿ ಕೋಲಾಹಲವೆಬ್ಬಿಸಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರವನ್ನು ಬಯಲಿಗೆಳೆದ ಡಿಐಜಿ ರೂಪಾ, ಅವ್ಯವಹಾರ ಆರೋಪ ಹೊತ್ತ ಕಾರಾಗೃಹ ಎಡಿಜಿಪಿ ಎನ್.ಎಚ್. ಸತ್ಯನಾರಾಯಣ ರಾವ್ ಸೇರಿದಂತೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಜೈಲಿನ ಅವ್ಯವಹಾರವನ್ನು ಬಯಲಿಗೆಳೆದ ಡಿಐಜಿ ರೂಪಾ ಡಿ. ಮೌದ್ಗಿಲ್ ರನ್ನು ಸಾರಿಗೆ ಸುರಕ್ಷತಾ ವಿಭಾಗದ ಡಿಐಜಿಯಾಗಿ ವರ್ಗಾಯಿಸಲಾಗಿದೆ. ಜುಲೈ 22 ರಂದು ನಿವೃತ್ತರಾಗಲಿರುವ ಅವ್ಯವಹಾರ ಆರೋಪ ಹೊತ್ತ ಕಾರಾಗೃಹ ಎಡಿಜಿಪಿ ಎನ್.ಎಚ್. ಸತ್ಯನಾರಾಯಣ ರಾವ್ ಅವರ ಹುದ್ದೆಗೆ ಎಡಿಜಿಪಿ ಎನ್ ಎಸ್ ಮೇಘರಿಕ್ ಅವರನ್ನು ನೇಮಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲು ಪ್ರಕರಣ, ಬಂಟ್ವಾಳದ ಗಲಭೆ ಪ್ರಕರಣದಲ್ಲಿ ಗುಪ್ತಚರ ಇಲಾಖೆಯ ವೈಫಲ್ಯದ ಹಿನ್ನೆಲೆಯಲ್ಲಿ ಡಿಜಿಪಿ ಎಂ.ಎನ್. ರೆಡ್ಡಿ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ ಡಿಜಿಪಿಯಾಗಿ ವರ್ಗಾಯಿಸಲಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಅಮೃತ ಪಾಲ್ ಅವರನ್ನು ಡಿಜಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ.

error: Content is protected !!
Scroll to Top