(ನ್ಯೂಸ್ ಕಡಬ) newskadaba.com ಕಡಬ, ಜು.18. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ಹಲ್ಲೆ ನಡೆಸಿದ ಆರೋಪಿಗಳಾದ ಪ್ರಕಾಶ್, ಟಿನ್ಸನ್, ಸನೂಷ್, ಲಿಜೋ, ಸಂತೋಷ್, ಬಿಜು ಎಂಬವರನ್ನು ಸೋಮವಾರದಂದು ಕೋರ್ಟಿಗೆ ಹಾಜರುಪಡಿಸಲಾಗಿದ್ದು, ಜುಲೈ 29 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇವರ ವಿರುದ್ದ ಐಪಿಸಿ ಸೆಕ್ಷನ್ 143, 147, 341, 323, 326, 307, 395, 149 ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಹಲ್ಲೆ ಘಟನೆಯ ಹಿನ್ನೆಲೆಯಲ್ಲಿ ಸೋಮವಾರದಂದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಯ ಪ್ರಮುಖರು ನೀಡಿದ್ದ ಕರೆಯಂತೆ ಕಡಬ ಬಂದ್ ಮಾಡಲಾಗಿತ್ತು.