ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನೆರಿಯ: ಪಿಕಪ್ ನಿಂದ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಯುವತಿಯರ ಮಾನಭಂಗಕ್ಕೆ ಯತ್ನ ► ಆರೋಪಿಯ ಬಂಧನ – News Kadaba

ನೆರಿಯ: ಪಿಕಪ್ ನಿಂದ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಯುವತಿಯರ ಮಾನಭಂಗಕ್ಕೆ ಯತ್ನ ► ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.31. ಪಿಕಪ್ ಚಾಲಕನೋರ್ವ ಯುವತಿಯೋರ್ವಳನ್ನು ಪ್ರೀತಿಸುವಂತೆ ಪೀಡಿಸಿದ್ದಲ್ಲದೆ ಪಿಕಪ್ ವಾಹನವನ್ನು ಯುವತಿ ಪ್ರಯಾಣಿಸುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆಸಿ ಯುವತಿ ಹಾಗೂ ಆಕೆಯ ಸಹೋದರಿಯನ್ನು ಎಳೆದಾಡಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನೆರಿಯದಲ್ಲಿ ನಡೆದಿದೆ.

ಆರೋಪಿ ಥೋಮಸ್ ಎಂಬಾತ ಅನ್ಯಕೋಮಿನ ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದು, ಸೋಮವಾರ ಸಂಜೆ ಪಾನಮತ್ತನಾಗಿ ತನ್ನ ಪಿಕಪ್ ವಾಹನವನ್ನು ಚಲಾಯಿಸಿಕೊಂಡು ಬಂದು ಯುವತಿ ಪ್ರಯಾಣಿಸುತ್ತಿದ್ದ ರಿಕ್ಷಾಕ್ಕೆ ಅಣಿಯೂರು ಸಮೀಪ ಢಿಕ್ಕಿ ಹೊಡೆದ ಪರಿಣಾಮ ಪಿಕಪ್ ಹಾಗೂ ರಿಕ್ಷಾ ಮಗುಚಿ ಬಿದ್ದಿದೆ. ಅಲ್ಲದೆ ರಿಕ್ಷಾದಲ್ಲಿದ್ದ ಯುವತಿ ಹಾಗೂ ಆಕೆಯ ಸಹೋದರಿಯ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಸಂಘಟನೆಯ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ‌ ಜಮಾಯಿಸಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಬಂಟ್ವಾಳ ಎಎಸ್ಪಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಆರೋಪಿ ಥೋಮಸ್ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top