ಅಡ್ಯಾರ್:‌ ಕಾರಿಗೆ ಢಿಕ್ಕಿ ಹೊಡೆದು ಕಾರಿನ ಮೇಲೆಯೇ ಮಗುಚಿ ಬಿದ್ದ ಖಾಸಗಿ ಬಸ್ ► ಹಲವರು ಗಂಭೀರ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.01. ಬಸ್ಸಿನ ಟಯರ್ ಸ್ಪೋಟಗೊಂಡು ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್ ಸಮೀಪ ಬುಧವಾರದಂದು ನಡೆದಿದೆ.







ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅರ್ಕುಳ ಬಳಿ ತಲುಪಿದಾಗ ಟಯರ್ ಸ್ಪೋಟಗೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿರುದ್ಧ ದಿಕ್ಕಿನಲ್ಲಿದ್ದ ಕಾರಿಗೆ ಢಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಹಾಗೂ ಬಸ್ಸಿನಲ್ಲಿದ್ದ ಹಲವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ.






error: Content is protected !!
Scroll to Top