(ನ್ಯೂಸ್ ಕಡಬ) newskadaba.com ಕಡಬ, ಆ.01. ಶ್ರೀ ರಾಮಕುಂಜೇಶ್ವರ ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆ, ಪುತ್ತೂರು ರೋಟರಿ (ಸಿಟಿ) ಜಂಟಿ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಕಾಲೇಜು ಆವರಣದಲ್ಲಿ ಆಯೋಜಿಸಲಾಯಿತು.

ಅಧ್ಯಕ್ಷತೆಯನ್ನು ಪ್ರೌಢಶಾಲಾ ಮುಖ್ಯಗುರು ಸತೀಶ್ ಭಟ್ ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸತೀಶ್ ಭಟ್, ರೋಟರಿ ಸಂಸ್ಥೆಯ ಮನೋಹರ್, ಅಮಿತಾ ಶಟ್ಟಿ, ಲೋರೆನ್ಸ್ ಗೋಂಜಾಲ್ ವೆನ್ಸ್, ದರ್ಣಪ್ಪ ಗೌಡ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಲಾಯಿತು. ಕನ್ನಡ ಉಪನ್ಯಾಸಕ ಗಣರಾಜ್ ಕುಂಬ್ಳೆಯವರು ಪ್ರಾಸ್ತಾವಿಸಿದರು. ವಿದ್ಯಾರ್ಥಿಗಳಾದ ಶ್ರೇಯಾ ಸ್ವಾಗತಿಸಿ, ಮಯೂರಿ ವಂದಿಸಿದರು. ಶ್ರೀರಕ್ಷಾ ಕಾರ್ಯಕ್ರಮ ನಿರೂಪಿಸಿದರು.
