(ನ್ಯೂಸ್ ಕಡಬ) newskadaba.com ಮಂಗಳೂರು, ಆ.02. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆ ಕೊನೆಗೂ ಸಂಚಾರಕ್ಕೆ ತೆರೆದುಕೊಳ್ಳುತ್ತಿದ್ದು, ಆಗಸ್ಟ್ 02 ರಿಂದ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ.
ಶಿರಾಡಿ ಘಾಟ್ ಕಾಂಕ್ರೀಟ್ ಕಾಮಗಾರಿ ಬಳಿಕ ಜುಲೈ 15 ರಂದು ರಸ್ತೆಯನ್ನು ಉದ್ಘಾಟನೆ ಮಾಡಲಾಗಿತ್ತಾದರೂ, ರಸ್ತೆಯ ಅಂಚಿನಲ್ಲಿ ಮಣ್ಣು ಹಾಕುವುದು, ಪ್ರಪಾತ ಇರುವ ಜಾಗಗಳಲ್ಲಿ ತಡೆಗೋಡೆ ಇಲ್ಲದಿರುವುದು ಅಪಾಯಕ್ಕೆ ಕಾರಣವಾಗಿತ್ತು. ಹೀಗಾಗಿ 15 ದಿನಗಳ ಕಾಲ ಘನ ವಾಹನ ಸಂಚಾರಕ್ಕೆ ನಿಷೇಧ ವಿಧಿಸಲಾಗಿತ್ತು. ಇದೀಗ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿರುವುದರಿಂದ ಈ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಿ ಹೊರಡಿಸಿರುವ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದ್ದು, ಆಗಸ್ಟ್ 2 ರಿಂದ ಶಿರಾಡಿ ಘಾಟ್‍ನಲ್ಲಿ ಭಾರೀ ವಾಹನಗಳು ಸೇರಿದಂತೆ ಎಲ್ಲಾ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಆದೇಶದಲ್ಲಿ ತಿಳಿಸಿದ್ದಾರೆ.