ಹಣಕಾಸಿನ ಅವ್ಯವಹಾರ ಮತ್ತು ಭ್ರಷ್ಟಾಚಾರದ ಆರೋಪ ► ಪುತ್ತೂರು ಮತ್ತು ಬಂಟ್ವಾಳ ಕೆಎಸ್ಸಾರ್ಟಿಸಿ ಡಿಪೋಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.02. ಪುತ್ತೂರು ಮತ್ತು ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಹಣಕಾಸಿನ ಅವ್ಯವಹಾರ ಮತ್ತು ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಮಂಗಳೂರು ಎಸಿಬಿ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿದ್ದಾರೆ.


ಕೆಎಸ್ಸಾರ್ಟಿಸಿ ಸಿಬ್ಬಂದಿಯೊಬ್ಬರ ದೂರಿನ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ಕೈಕಂಬ ಸಮೀಪದಲ್ಲಿ ಕಾರ್ಯಾಚರಿಸುತ್ತಿರುವ ಕೆಎಸ್ಸಾರ್ಟಿಸಿ ಡಿಪೋ ಹಾಗೂ ಪುತ್ತೂರಿನ ಕೆಎಸ್ಸಾರ್ಟಿಸಿ ಡಿಪೋಗಳಿಗೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಹಣಕಾಸಿನ ಅವ್ಯವಹಾರದ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸಿ, ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಭ್ರಷ್ಟಾಚಾರ ನಿಗ್ರಹ ದಳದ ಎಡಿಜಿಪಿಯವರ ನಿರ್ದೇಶನದಂತೆ ಪಶ್ಚಿಮ ವಲಯ ಎಸಿಬಿ ಎಸ್ಪಿ ಶೃತಿ ಎನ್.ಎಸ್., ಡಿವೈಎಸ್ಪಿ ಸುಧೀರ್ ಹೆಗ್ಡೆ ನೇತೃತ್ವದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಯೋಗೀಶ್ ಕುಮಾರ್ ಹಾಗೂ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿದ್ದಾರೆ.

Also Read  ಅರಂತೋಡು: ಸ್ವಾತಂತ್ರ್ಯ ದಿನಾಚರಣೆ ಹಾಗೂ ನಿವೃತ್ತ ಸೈನಿಕ ಫಸೀಲು ರವರಿಗೆ ಸನ್ಮಾನ

error: Content is protected !!
Scroll to Top