(ನ್ಯೂಸ್ ಕಡಬ) newskadaba.com ಮುಲ್ಕಿ, ಆ.03. ತನ್ನ ಐದು ವರ್ಷದ ಮಗುವನ್ನು ಬಾವಿಗೆ ತಳ್ಳಿ ತದನಂತರ ಬಾವಿಗೆ ಹಾರಿದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿಯಲ್ಲಿ ಗುರುವಾರದಂದು ನಡೆದಿದೆ.
ಮುಲ್ಕಿ ಗೇರುಕಟ್ಟೆ ಜ್ಯೂನಿಯರ್ ಕಾಲೇಜು ಬಳಿಯ ನಿವಾಸಿ ಸುಧಾಕರ ಎಂಬವರ ಪತ್ನಿ ಸುಜಾತಾ(48) ಹಾಗೂ ಮಗಳು ಕೃತಿಕಾ(5) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಗುರುವಾರದಂದು ತಾಯಿ, ಮಗಳು ಮನೆಯಿಂದ ಕಾಣೆಯಾಗಿದ್ದು, ಈ ಬಗ್ಗೆ ಹುಡುಕಾಡಿದಾಗ ಸುಜಾತಾ ಹಾಗೂ ಕೃತಿಕಾರ ಮೃತದೇಹಗಳು ಮನೆಯ ಬಾವಿಯಲ್ಲಿ ತೇಲುತ್ತಿರುವುದು ಕಂಡುಬಂದಿದ್ದು, ಮಗುವನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.
Also Read ಕಡಬ: ಅಕ್ಷರದಾಸೋಹ ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ನೀಡುವಂತೆ ಎಸ್ಡಿಪಿಐ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ